ಬೆಂಗಳೂರು : ಹೃದಯಾಘಾತದಿಂದ ಬಿಎಂಟಿಸಿ ಬಸ್ ಚಾಲಕ ಸಾವನ್ನಪ್ಪಿದ ಘಟನೆ ದೇವನಹಳ್ಳಿ 50 ನೇ ಬಸ್ ಡಿಪೋದಲ್ಲಿ ನಡೆದಿದೆ.
ಮೃತರನ್ನ ಚಿಕ್ಕಬಳ್ಳಾಪುರ ಮೂಲದ ನಾರಾಯಣಪ್ಪ ಎಂದು ಗುರುತಿಸಲಾಗಿದೆ.ರಾತ್ರಿ ಕೆಲಸ ಮುಗಿಸಿ ಬಸ್ ಸಮೇತ ಡಿಪೋಗೆ ಬಂದಿದ್ದ ನಾರಾಯಣಪ್ಪ ಬಸ್ ನಿಲ್ಲಿಸುತ್ತಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ಪರಿಣಾಮ ಸ್ಟೇರಿಂಗ್ ಮೇಲೆಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ, ಅಷ್ಟರಲ್ಲೇ ನಾರಾಯಣಪ್ಪ ಮೃತಪಟ್ಟಿದ್ದಾರೆ .ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
You Might Also Like
TAGGED:BMTC