ಬೆಂಗಳೂರು : ಬೆಂಗಳೂರಿನ ಬೆಳ್ಳಂದೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡದ ಸಜ್ಜಾ ಕುಸಿದು ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.
ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ .
ಮೃತರನ್ನು ಅಮೀರ್ ಹುಸೇನ್, ಮಮ್ತಾಜ್ ಅಲಿ ಎಂದು ಗುರುತಿಸಲಾಗಿದೆ. ಸಜ್ಜಾ ಕುಸಿದು ಕಟ್ಟಡದ 13 ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.