BIG NEWS: ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂಪಾಯಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು: ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಲಾಲ್ ಬಾಗ್ ನಲ್ಲಿ ನಾಗರೀಕರ ಜತೆ ನಡಿಗೆ ಹಾಗೂ ಸಂವಾದದ ನಂತರ ಟನಲ್ ರಸ್ತೆಗೆ ಪ್ರವೇಶ ಜಾಗ ಪರಿಶೀಲನೆ ನಡೆಸಿ ಮಾತನಾಡಿದ ಡಿಸಿಎಂ, ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ ಸಲಹೆ, ದೂರು ಆಲಿಸಿದ್ದೇನೆ. ಅವರ ಸಮಸ್ಯೆ ಬಗೆಹರಿಸಲಾಗುವುದು. ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಿದ್ದೇವೆ. ಹಿರಿಯರು ಹಾಗೂ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಮ್ ಮಾಡಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಅವಕಾಶ ಇರುವೆಡೆ ಲಾಲ್ ಬಾಗ್ ಮಾದರಿಯಲ್ಲಿ ಟ್ರೀಪಾರ್ಕ್ ಮಾಡಲು ಅರಣ್ಯ ಇಲಾಖೆ ಜೊತೆ ಚರ್ಚೆ ಮಾಡುತ್ತೇನೆ. ಅದಕ್ಕೆ ಆರ್ಥಿಕ ಬೆಂಬಲವನ್ನು ನೀಡಲಾಗುವುದು ಎಂದರು.

ಇಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ವೈದ್ಯರು ಹಾಗೂ ಆಂಬುಲೆನ್ಸ್ ಸೇವೆ ನಿಯೋಜನೆಗೆ ತೀರ್ಮಾನಿಸಿದ್ದೇವೆ. ಇನ್ನು ಮುಂದೆ ಇಲ್ಲಿನ ಶೌಚಾಲಯಗಳ ಸೌಲಭ್ಯವನ್ನು ಉಚಿತವಾಗಿ ಒದಗಿಸಲಾಗುವುದು.ಬೆಂಗಳೂರಿನ ಕಸ ವಿಲೇವಾರಿ, ವಾಹನ ನಿಲುಗಡೆ, ಸೇರಿದಂತೆ ಅನೇಕ ವಿಚಾರವಾಗಿ ಸಲಹೆ, ಅಭಿಪ್ರಾಯಗಳು ಬಂದಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಲಾಲ್ ಬಾಗ್ ಸಾರ್ವಜನಿಕರ ಆಸ್ತಿ. ಈ ಸಾರ್ವಜನಿಕರ ಆಸ್ತಿ ಉಳಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಆರು ಎಕರೆ ಭೂಮಿ ವಶಪಡಿಸಿಕೊಳ್ಳುವ ಅಗತ್ಯವಿಲ್ಲ. ಅರ್ಧ ಎಕರೆ ಪ್ರದೇಶದಲ್ಲಿ ಅಶೋಕ ಪಿಲ್ಲರ್ ಕಡೆ ಟನಲ್ ರಸ್ತೆಗೆ ಪ್ರವೇಶ ಹಾಗೂ ನಿರ್ಗಮನಕ್ಕೆ ಅವಕಾಶ ಕಲ್ಪಿಸಲಾಗುವುದು. ಪಾರ್ಕಿಂಗ್ ಗಾಗಿ ಇರುವ ಜಾಗದಲ್ಲಿ ಸುಮಾರು ಒಂದು ಎಕರೆ ಜಾಗವನ್ನು ಸ್ಟೋರೇಜ್ ಗೆ ಬಳಸಿಕೊಳ್ಳುತ್ತೇವೆ. ನಂತರ ಅದನ್ನು ತೆರವುಗೊಳಿಸಿ ಲಾಲ್ ಬಾಗ್ ಗೆ ಕೊಡುತ್ತೇವೆ. ಸಣ್ಣದಾಗಿರುವ ಗಿಡಗಳನ್ನು ತೆರವುಗೊಳಿಸಿ, ಮತ್ತೆ ಗಿಡ ನೆಡುತ್ತೇವೆ. ಉಳಿದಂತೆ ಲಾಲ್ ಬಾಗ್ ಉದ್ಯಾನಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಯೋಜನೆಯ ಟೆಂಡರ್ ಕರೆಯಲಾಗಿದೆ. ಬಿಡ್ ನಲ್ಲಿ ಯಾರು ಭಾಗವಹಿಸುತ್ತಾರೆ ಎಂದು ನೋಡಿ, ನಂತರ ಅತ್ಯುತ್ತಮ ಬಿಡ್ ಮಾಡಿದವರಿಗೆ ಟೆಂಡರ್ ನೀಡಲಾಗುವುದು. ಎಲ್ಲಾ ಪಾಲಿಕೆ ವ್ಯಾಪ್ತಿಯಲ್ಲಿನ ಉದ್ಯಾನಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಭಿಪ್ರಾಯ, ಸಲಹೆ, ಅಹವಾಲು ಆಲಿಸಲಾಗುವುದು ಎಂದು ತಿಳಿಸಿದರು.

ಇನ್ನು ಬೆಂಗಳೂರಿನ ಕಸದ ಸಮಸ್ಯೆ ವಿಚಾರವಾಗಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದು, ಎಲ್ಲೆಲ್ಲಿ ಬ್ಲಾಕ್ ಸ್ಪಾಟ್ ಇದೆಯೋ ಅಲ್ಲಿ ಕ್ಯಾಮೆರಾ ಅಳವಡಿಸಿ, ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read