ಬೆಂಗಳೂರು: ವಿಧಾನಸೌಧದಲ್ಲಿ ಸಂಸದ ಡಾ.ಕೆ. ಸುಧಾಕರ್ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ನಸೀರ್ ಅಹಮದ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ನಸೀರ್ ಅಹಮದ್ ಗೆ 42ನೇ ಎಸಿಎಂಜೆ ಕೋರ್ಟ್ ನಿಂದ ಸಮನ್ಸ್ ನೀಡಲಾಗಿದೆ. ಅ. 27ರಂದು ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ.
2019ರ ಜುಲೈ 10ರಂದು ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಲು ತೆರಳಿದ್ದಾಗ ಚಿಕ್ಕಬಳ್ಳಾಪುರ ಶಾಸಕರಾಗಿದ್ದ ಕೆ. ಸುಧಾಕರ್ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿತ್ತು. ವಕೀಲ ಎನ್.ಪಿ. ಅಮೃತೇಶ್ ವಿಧಾನಸೌಧ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಸುಧಾಕರ್ ಹೇಳಿಕೆ ದಾಖಲಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು.