HomeLatest News18 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ, ಅನುದಾನಿತ ಶಾಲೆಗಳಿಗೂ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು...

18 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ, ಅನುದಾನಿತ ಶಾಲೆಗಳಿಗೂ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಶಿವಮೊಗ್ಗ: ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಸರ್ಕಾರ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಿದೆ. ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ನಾಲ್ಕರಿಂದ ಐದು ಸಾವಿರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಗೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲಿದ್ದು, ಸರ್ಕಾರದಿಂದಲೇ ಗೌರವ ಧನ ಪಾವತಿಸಲಾಗುವುದು. ಇದರ ಜತೆಗೆ ಸರ್ಕಾರಿ ಶಾಲೆಗಳ 12,000, ಅನುದಾನಿತ ಶಾಲೆಗಳ 6 ಸಾವಿರ ಸೇರಿ 18,000 ಶಿಕ್ಷಕರ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular