ಕೃತಕ ಬುದ್ಧಿಮತ್ತೆ ತಂತ್ರಜ್ಞಾನದೊಂದಿಗೆ ಯಶಸ್ವಿಯಾಗಿ ನಡೆದ ನ್ಯಾಯಾಧೀಶರ ನೇಮಕಾತಿ ಲಿಖಿತ ಪರೀಕ್ಷೆ | Civil Judges Exam

ಬೆಂಗಳೂರು: ರಾಜ್ಯದ ಸಿವಿಲ್ ನ್ಯಾಯಾಧೀಶರ ನೇಮಕಾತಿ ಕುರಿತ ಲಿಖಿತ ಪರೀಕ್ಷೆಯನ್ನು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಅತ್ಯಂತ ಯಶಸ್ವಿಯಾಗಿ ಶನಿವಾರ ನಡೆಸಲಾಯಿತು.

ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ನಗರಗಳ ಒಟ್ಟು 21 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಅರ್ಜಿ ಸಲ್ಲಿಸಿದ್ದ 10,069 ಮಂದಿ ಪೈಕಿ 8,408 (ಶೇ.83.5%) ಮಂದಿ ಪರೀಕ್ಷೆಗೆ ಹಾಜರಾಗಿದ್ದರು.

ಮುಖ ಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಯಿತು. ಬ್ಲೂಟೂತ್ ಇತ್ಯಾದಿ ಡಿಜಿಟಲ್ ಸಾಧನಗಳು ಕಾರ್ಯನಿರ್ವಹಿಸದಂತೆ ಪರೀಕ್ಷಾ ಕೇಂದ್ರಗಳ ಸುತ್ತ ಜಾಮರ್ ಅಳವಡಿಸಲಾಗಿತ್ತು. ಇಡೀ ಪ್ರಕ್ರಿಯೆಯನ್ನು ಕೆಇಎ ಕಚೇರಿಯಲ್ಲಿನ ಕಮಾಂಡ್ ಸೆಂಟರ್ ಮೂಲಕ ನಿರ್ವಹಿಸಲಾಯಿತು. ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳ ವೆಬ್ ಕಾಸ್ಟಿಂಗ್ ಮೂಲಕ ಕಟ್ಟುನಿಟ್ಟಿನ ನಿಗಾ ವಹಿಸಿದ್ದನ್ನು ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಂ, ಹೈಕೋರ್ಟ್ ರಿಜಿಸ್ಟ್ರಾರ್ ಚಂದ್ರಕಲಾ ಖುದ್ದು ವೀಕ್ಷಿಸಿದರು.

ಇದಲ್ಲದೆ, ಪ್ರತಿ ಪರೀಕ್ಷಾ ಕೇಂದ್ರಕ್ಕೂ ಒಬ್ಬರು ಜಿಲ್ಲಾ ನ್ಯಾಯಾಧೀಶರನ್ನು ಉಸ್ತುವಾರಿಗಳಾಗಿ ನಿಯೋಜಿಸಲಾಗಿತ್ತು. ನ್ಯಾಯಾಂಗ ಇಲಾಖೆಯ ಸಹಕಾರದಿಂದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು. KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಹಾಗೂ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಖುದ್ದು ಮೇಲ್ವಿಚಾರಣೆ ನಡೆಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read