ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನ ಅಧಿದೇವತೆ ಹಾಸನಾಂಬ ದೇವಿ ದಿನವಾದ ಶನಿವಾರವೂ ಅಪಾರ ಸಂಖ್ಯೆಯ ಭಕ್ತರು ದರ್ಶನ ಪಡೆದುಕೊಂಡಿದ್ದಾರೆ.
ವೀಕೆಂಡ್ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಒಂದೇ ದಿನ ಒಂದು ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ.
ಹಾಸನಾಂಬೆ ದೇವಾಲಯದಲ್ಲಿ ಶನಿವಾರ ಒಂದೇ ದಿನ ಒಂದು ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ. ಒಂದು ಸಾವಿರ ರೂಪಾಯಿ ಮೌಲ್ಯದ ಟಿಕೆಟ್ ಮಾರಾಟದಿಂದ 65 ಲಕ್ಷ ರೂಪಾಯಿ, 300 ರೂಪಾಯಿ ಮೌಲ್ಯದ ಟಿಕೆಟ್ ಮಾರಾಟದಿಂದ 35 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಹಾಸನಾಂಬೆ ದರ್ಶನದಲ್ಲಿ ಶನಿವಾರ ದಾಖಲೆಯ ಆದಾಯ ಸಂಗ್ರಹವಾಗಿದೆ.