ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿಯೊಬ್ಬರು ಹೃದಯಾಘಾತಕ್ಕೆ ಒಳಗಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ನಡೆದಿದೆ.
ಯಶೋಧಾ ಹೃದಯಾಘಾತಕ್ಕೆ ಒಳಗಾದ ಶಿಕ್ಷಕಿ. ಬೊಮ್ಮಸಂದ್ರ ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೊಮ್ಮಸಂದ್ರದಲ್ಲಿ ಸಮೀಕ್ಷೆ ಜವಾಬ್ದಾರಿ ಹೊತ್ತಿದ್ದ ಅವರು ಸಮೀಕ್ಷೆ ಕಾರ್ಯದಲ್ಲಿದ್ದಾಗಲೇ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ವೈದ್ಯರು ಆಪರೇಷನ್ ಮಾಡಿ ಸ್ಟೆಂಟ್ ಅಳವಡಿಸಿದ್ದಾರೆ. ಸಮೀಕ್ಷಾ ಕಾರ್ಯದ ತೀವ್ರ ಒತ್ತಡದಿಂದಾಗಿ ಶಿಕ್ಷಕಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.