HomeLatest NewsRSS ಗೆ 100 ವರ್ಷದ ತುಂಬಿದ ಬೆನ್ನಲ್ಲೇ ಬಿಗ್ ಶಾಕ್: ರಾಜ್ಯದಲ್ಲಿ ‘ಸಂಘ’ದ ಚಟುವಟಿಕೆಗೆ ನಿರ್ಬಂಧ...

RSS ಗೆ 100 ವರ್ಷದ ತುಂಬಿದ ಬೆನ್ನಲ್ಲೇ ಬಿಗ್ ಶಾಕ್: ರಾಜ್ಯದಲ್ಲಿ ‘ಸಂಘ’ದ ಚಟುವಟಿಕೆಗೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ..?

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್.ಎಸ್.ಎಸ್.)ಗೆ 100 ವರ್ಷ ತುಂಬಿದ ಬೆನ್ನಲ್ಲೇ ಶಾಕ್ ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಆರ್‌.ಎಸ್‌.ಎಸ್‌. ಚಟುವಟಿಕೆಗಳಿಗೆ ಸರ್ಕಾರ ಬ್ರೇಕ್ ಹಾಕಲಿದೆ.

ಆರ್.ಎಸ್.ಎಸ್. ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಸಾರ್ವಜನಿಕ, ಸರ್ಕಾರಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗೆ ಬ್ರೇಕ್ ಹಾಕಲಾಗುವುದು.

ರಾಜ್ಯದಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಿಎಂಗೆ ಕೆಲವು ಶಾಸಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಶಾಲಾ-ಕಾಲೇಜುಗಳ ಆವರಣ, ಉದ್ಯಾನವನ, ಸರ್ಕಾರಿ ಮೈದಾನ, ಹಾಸ್ಟೆಲ್ ಕ್ಯಾಂಪಸ್ ಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆ ನಿರ್ಬಂಧಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್ ಎಸ್.ಎಸ್. ಚಟುವಟಿಕೆಗೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸಿದೆ. ಕಾನೂನಾತ್ಮಕವಾಗಿ ಆರ್.ಎಸ್.ಎಸ್. ನಿಷೇಧಿಸಲು ಸಾಧ್ಯವಿಲ್ಲವೆಂಬುದು ಅರಿತಿದೆ. ಹೀಗಾಗಿ ಆರ್.ಎಸ್.ಎಸ್. ಚಟುವಟಿಕೆ ನಿರ್ಬಂಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಈ ಕುರಿತಾಗಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular