ರಾಯಚೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ಅಧಿಕಾರ ಹಂಚಿಕೆ ಚರ್ಚೆ ಎಂಬುದು ಕೇವಲ ಊಹಾಪೂಹ. ಅಂತಹ ಯಾವುದೇ ಚರ್ಚೆಯೇ ನಡೆದಿಲ್ಲ ಎಂದು ತಿಳಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿ ಬದಲಾವಣೆ ಚರ್ಚೆ ಎಂಬುದು ಸತ್ಯಕ್ಕೆ ದೂರವಾದ ಸುದ್ದಿ. ಇಂತಹ ಯಾವುದೇ ಚರ್ಚೆ ನಡೆದಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಈ ಹಿಂದೆ ಅನೇಕಬಾರಿ ಹೇಳಿದ್ದಾರೆ ಎಂದರು.
ಯಾವುದೇ ಅಧಿಕಾರ ಹಂಚಿಕೆಯೂ ಇಲ್ಲ, ನವೆಂಬರ್ ನಲ್ಲಿ ಕ್ರಾಂತಿಯೂ ಇಲ್ಲ. ಇವೆಲ್ಲವೂ ಕೇವಲ ಊಹಾಪೋಹ ಅಷ್ಟೇ ಎಂದು ತಿಳಿಸಿದರು.
You Might Also Like
TAGGED:ಯತೀಂದ್ರ ಸಿದ್ದರಾಮಯ್ಯ