ಕಲಬುರಗಿ: ಕಲಬುರಗಿ ಜಂಟಿ ಹೋರಾಟ ಸಮಿತಿಯಿಂದ ಇಂದು ತುರ್ತು ನೆರೆ ಪರಿಹಾರಕ್ಕೆ ಆಗ್ರಹಿಸಿ ಕಲಬುರಗಿ ಬಂದ್ ಗೆ ಕರೆ ನೀಡಲಾಗಿದೆ.
ಮಳೆ, ಪ್ರವಾಹದಿಂದ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು. ಜಿಲ್ಲೆಗೆ ಐದು ಸಾವಿರ ಕೋಟಿ ರೂಪಾಯಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದೆ.
ಬಂದ್ ಗೆ ರೈತಪರ, ಕನ್ನಡಪರ, ವಿವಿಧ ಸಂಘ-ಸಂಸ್ಥೆಗಳು ಬೆಂಬಲ ಘೋಷಿಸಿವೆ. ಎತ್ತಿನ ಗಾಡಿ, ಟ್ರ್ಯಾಕ್ಟರ್ ಗಳೊಂದಿಗೆ ವಿನೂತನ ಪ್ರತಿಭಟನೆಗೆ ರೈತರು ಮುಂದಾಗಿದ್ದಾರೆ.
ಬೆಳ್ಳಂಬೆಳಗ್ಗೆ ಹೋರಾಟಗಾರರು ಕೇಂದ್ರೀಯ ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ್ದು, ಬಸ್ ಸಂಚಾರ ಬಂದ್ ಮಾಡುವಂತೆ ಒತ್ತಾಯಿಸಿದ್ದಾರೆ. ಕಲಬುರಗಿ ಬಂದ್ ಗೆ 20ಕ್ಕೂ ಅಧಿಕ ಸಂಘ ಸಂಸ್ಥೆಗಳಿಂದ ಬೆಂಬಲ ಸೂಚಿಸಲಾಗಿದೆ. ರೈತರ ಸಾಲ ಮನ್ನಾ, ಮಳೆ ಪ್ರವಾಹದಿಂದ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು. ಜಿಲ್ಲೆಗೆ 5 ಸಾವಿರ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಲಾಗಿದೆ.