ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ವಿಶ್ವ ಶಾಂತಿಗಾಗಿ ಸರ್ವಧರ್ಮ ಮಹಾ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ. ಸರ್ವಧರ್ಮ ಮಹಾ ಸಂಗಮ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ದಾನೇಶ್ವರ ಶ್ರೀಗಳ ನೇತೃತ್ವದಲ್ಲಿ ಧರ್ಮ ಸಮಾವೇಶ ನಡೆಯಲಿದೆ.
ಬಸವ ಗೋಪಾಲ ನೀಲಮಾಣಿಕ ಮಠದ ದಾನೇಶ್ವರ ಸ್ವಾಮೀಜಿ, ವಿವಿಧ ಮಠಾಧೀಶರು, ವಿವಿಧ ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ವಿವಿಧ ಜಿಲ್ಲೆಗಳಿಂದ ಅಪಾರ ಭಕ್ತರು ಆಗಮಿಸಲಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.