ಲಖನೌ: ಉತ್ತರ ಪ್ರದೇಶದಲ್ಲಿ ಕ್ರಿಮಿನಲ್ ಗಳ ಎನ್ ಕೌಂಟರ್ ಕಾರ್ಯಾಚರಣೆ ಮುಂದುವರೆದಿದೆ. ಅತ್ಯಾಚಾರ ಆರೋಪಿಯನ್ನು ಪೊಲೀಸರು ಗುಂಡಿಟ್ಟು ಹತ್ಯೆಗೈದಿರುವ ಘಟನೆ ನಡೆದಿದೆ.
ಶಹಜಾದ್ ಅಲಿಯಾಸ್ ನಿಕ್ಕಿ ಎನ್ ಕೌಂಟರ್ ಗೆ ಬಲಿಯಾಗಿರುವ ಅತ್ಯಾಚಾರ ಆರೋಪಿ. ಮೀರತ್ ನಲ್ಲಿ ಶಹಜಾದ್ ಮೇಲೆ ಗುಂಡಿನ ದಾಳಿ ನಡೆಸಿ ಪೊಲೀಸರು ಹತ್ಯೆಗೈದಿದ್ದಾರೆ.
ಆರೋಪಿ ಶಜಾದ್ ಅಲಿಯಾಸ್ ನಿಕಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಪೊಲೀಸರು ಆರೋಪಿ ಮೇಲೆ ಫೈರಿಂಗ್ ಮಾಡಿದ್ದಾರೆ. ಅತ್ಯಾಚಾರ ಆರೋಪಿ ಶಹಜಾದ್ ನನ್ನು ಪೊಲೀಸರು ಹಿಡೆದುರುಳಿಸಿದ್ದಾರೆ. ಈ ಮೂಲಕ ಅತ್ಯಾಚಾರದಂತ ಕೃತ್ಯವೆಸಗುವ ಕ್ರಿಮಿಗಳಿಗೆ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ.