BREAKING: ಹಾಸನಾಂಬೆ ದರ್ಶನಕ್ಕೆ ಬಂದಿದ್ದ ಹೆಚ್.ಡಿ.ರೇವಣ್ಣ ಕಾರು ತಡೆದ ಕಂದಾಯ ಇಲಾಖೆ ಅಧಿಕಾರಿಗಳು

ಹಾಸನ: ಹಸನಾಂಬೆ ದೇವಿ ದರ್ಶನಕ್ಕೆ ನಾಲ್ಕನೇ ದಿನವಾದ ಇಂದು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ರಾಜಕೀಯ ನಾಯಕರು, ಅಧಿಕಾರಿಗಳು ಕೂಡ ಹಾಸನಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಈ ನಡುವೆ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಕೂಡ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ್ದಾರೆ.

ಹಾಸನಾಂಬೆ ದರ್ಶನಕ್ಕೆ ಕಾರಿನಲ್ಲಿ ಆಗಮಿಸಿದ ರೇವಣ್ಣ ಅವರನ್ನು ಕಂದಾಯ ಇಲಾಖೆ ಅಧಿಕಾರಿಗಳು ತಡೆದ ಘಟನೆ ನಡೆದಿದೆ. ಶಿಷ್ಠಾಚಾರ ಪಾಲನೆಗೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡದೇ ಶಾಸಕ ಹೆಚ್,ಡಿ.ರೇವಣ್ಣ ಹಾಸನಾಂಬೆ ದರ್ಶನಕ್ಕೆ ತಮ್ಮದೇ ಕಾರಿನಲ್ಲಿ ತಮ್ಮ ಭದ್ರತಾ ವ್ಯವಸ್ಥೆಗಳೊಂದಿಗೆ ಆಗಮಿಸಿದ್ದಾರೆ. ಈ ವೇಳೆ ಕಂದಾಯ ಇಲಾಖೆ ಅಧಿಕಾರಿಗಳು ಶಾಸಕರ ಕಾರನ್ನು ತಡೆದಿದ್ದಾರೆ.

ಅಧಿಕಾರಿಗಳು ಕಾರನ್ನು ತಡೆಯುತ್ತಿದ್ದಂತೆ ಅಧಿಕಾರಗಳ ವಿರುದ್ಧ ಶಾಸಕರು ಗರಂ ಆದರು. ಕಾರನ್ನು ದೇವಾಲಯದ ಬಳಿ ಕೊಂಡೊಯ್ಯಲು ಅವಕಾಶವಿಲ್ಲ ಎಂದು ಅಧಿಕಾರಿಗಳು ತಿಳಿಸಿದರು. ಬಳಿಕಕಾರಿನಿಂದ ಇಳಿದ ರೇವಣ್ಣ ನಡೆದುಕೊಂಡೇ ದೇವಾಲಯಕ್ಕೆ ತೆರಳಿದರು. ಹೆಚ್.ಡಿ.ರೇವಣ್ಣ ಹಾಗೂ ಪತ್ನಿ ಭವಾನಿಗೆ ದೇವರ ದರ್ಶನಕ್ಕೆ ನೇರ ಎಂಟ್ರಿ ನೀಡಲಾಯಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read