ಬೆಂಗಳೂರು : ಬಸ್ ನಲ್ಲಿ ಕಾಮುಕರ ಹಾವಳಿ ಹೆಚ್ಚುತ್ತಿದೆ. ಮಹಿಳೆಯರು, ಯುವತಿಯರು ಒಬ್ಬಂಟಿಯಾಗಿ ಪ್ರಯಾಣಿಸಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.
ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ವೈದ್ಯೆಗೆ ಪಿರೋಜ್ ಖಾನ್ ಎಂಬಾತ ಅವರ ಪಕ್ಕದಲ್ಲೇ ಕುಳಿತು ಕಿರುಕುಳ ನೀಡಿದ್ದಾನೆ. ಅವರ ಖಾಸಗಿ ಭಾಗ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ. ವಿಷಯ ತಿಳಿದ ಕಂಡಕ್ಟರ್ ಮತ್ತು ಪ್ರಯಾಣಿಕರು ಆರೋಪಿಯನ್ನು ಹಿಡಿದು ಸಂಜಯ್ ನಗರದ ಪೊಲೀಸರಿಗೆ ಒಪ್ಪಿಸಿದ್ದಾರೆ.