ಮಡಿಕೇರಿ: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾಗಿ ಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ರಸ್ತೆಯಲ್ಲಿ ನಡೆದಿದೆ.
ಇಲ್ಲಿನ ಕಾಗಡಿಕಟ್ಟೆ ಬಳಿ ಗೂಡ್ಸ್ ವಾಹನ ಪಲ್ಟಿಯಾಗಿದೆ. ಗೂಡ್ಸ್ ನಲ್ಲಿದ್ದ ಮೂರು ಗೋವುಗಳು ಗಾಅಗೊಂಡಿವೆ. ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಅಪಘಾತವಾಗುತ್ತಿದ್ದಂತೆ ಗೂಡ್ಸ್ ವಾಹನದಲ್ಲಿದ್ದ ಇಬ್ಬರು ಆರೋಪಿಗಳನ್ನು ಇನ್ನೋವಾ ಕಾರಿನಲ್ಲಿ ಬಂದವರು ಬೇರೆಡೆ ಸಾಗಿಸಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.