ಬಾಗಲಕೋಟೆ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ, ಅಧಿಕಾರ ಹಂಚಿಕೆ ಕುರಿತು ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಸಕರ ಅಭಿಪ್ರಾಯ ಇಲ್ಲದೇ ಸಿಎಂ ಆಗೋಕೆ ಆಗಲ್ಲ. ಬಹುಮತ ಇದ್ರೆ ಮಾತ್ರ ಸಿಎಂ ಆಗಲು ಸಾಧ್ಯ ಎಂದು ಹೇಳಿದ್ದಾರೆ.
ಶಾಸಕರ ಅಭಿಪ್ರಾಯ ಹಾಗೂ ಹೈಕಮಾಂಡ್ ಆಶಿರ್ವಾದ ಎರಡೂ ಮುಖ್ಯ. ಶಾಕರ ಅಭಿಪ್ರಾಯ, ಹೈಕಮಾಂಡ್ ಆಶಿರ್ವಾದ ಎರಡೂ ಇದ್ದರೆ ಮಾತ್ರ ಸಿಎಂ ಆಗಲು ಸಾಧ್ಯ ಎಂದು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಇಂದು ಸಚಿವರು, ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದು, ಈ ಸಂದರ್ಭದಲ್ಲೇ ಅಚ್ಚರಿ ಹೇಳಿಕೆ ನೀಡಿರುವುದು ನಿಜಕ್ಕೂ ನವೆಂಬರ್ ನಲ್ಲಿ ರಾಜಕೀಯ ಕ್ರಾಂತಿ ಆಗಲಿದೆಯೇ ಎಂಬ ಕುತೂಹಲ ಮೂಡಿಸಿದೆ.