ಬೆಂಗಳೂರು: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕೋರ್ಟ್ ಬಿಗ್ ಶಾಕ್ ನೀಡಿದೆ.
ಪ್ರಕರಣದಿಂದ ಕೈಬಿಡುವಂತೆ ಭವಾನಿ ರೇವಣ್ಣ ಹಾಗೂ ಕೆ.ಆರ್.ರಾಜಗೋಪಾಲ್ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದೆ. ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಕೆ.ಎ.ರಾಜಗೋಪಾಲ್ ಎ7 ಆರೋಪಿಯಾಗಿದ್ದು, ಭವಾನಿ ರೇವಣ್ಣ ಎ8 ಆರೋಪಿಯಾಗಿದ್ದಾರೆ.
ಪ್ರಕರಣದಿಂತ ತಮ್ಮನ್ನು ಕೈಬಿಡುವಂತೆ ಕೋರಿ ಭವಾನಿ ರೇವಣ್ಣ ಕೋರ್ಟ್ ಮೆಟ್ಟಿಲೇದ್ದರು. ಅರ್ಜಿ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್.ಶಿವಕುಮಾರ್, ಭವಾನಿ ರೇವಣ್ಣ ಹಾಗೂ ರಾಜಗೋಪಾಲ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.