ವೈದ್ಯಕೀಯ ಕೋರ್ಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 200 ಹೆಚ್ಚುವರಿ ಸೀಟು ಮಂಜೂರು, ಸೀಟು ಹಂಚಿಕೆಗೆ ಆಯ್ಕೆ ದಾಖಲಿಸಲು ದಿನಾಂಕ ವಿಸ್ತರಣೆ

ಬೆಂಗಳೂರು:  ರಾಜ್ಯದ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ MCC ತಲಾ 50 ಸೀಟುಗಳಂತೆ ಒಟ್ಟು 200 ಸೀಟು ಹೆಚ್ಚುವರಿಯಾಗಿ ಮಂಜೂರು ಮಾಡಿರುವ ಕಾರಣ 3ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅ.15ರಂದು ಬೆಳಿಗ್ಗೆ 8 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ.

ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜ್, ಬೆಂಗಳೂರು ನಾಗರೂರಿನ ಬಿಜಿಎಸ್, ತುಮಕೂರಿನ ಶ್ರೀದೇವಿ, ಮಂಗಳೂರಿನ ಎ.ಜೆ. ವೈದ್ಯಕೀಯ ಕಾಲೇಜುಗಳಿಗೆ ಹೆಚ್ಚುವರಿ ಸೀಟು ಹಂಚಿಕೆ ಮಾಡಿದ್ದು, ಅವುಗಳ ಪ್ರವೇಶಕ್ಕೆ ಹೊಸದಾಗಿ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಈ ಕಾಲೇಜುಗಳ ಶುಲ್ಕವನ್ನು ಗಮನಿಸಿ ಆಪ್ಷನ್ಸ್ ದಾಖಲಿಸಬೇಕು.

ಈಗಾಗಲೇ ಮೊದಲ ಮತ್ತು ಎರಡನೇ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾಗಿ ಕಾಲೇಜುಗಳಿಗೆ ವರದಿ ಮಾಡಿಕೊಂಡವರು ಕೂಡ ಈ ನಾಲ್ಕು ಕಾಲೇಜುಗಳ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಅಂತಹವರು ಅ.15ರಂದು ಬೆಳಿಗ್ಗೆ 11ರಿಂದ ಅ.16ರಂದು ಬೆಳಿಗ್ಗೆ 8 ಗಂಟೆವರೆಗೆ ಆಪ್ಷನ್ಸ್ ದಾಖಲಿಸಬಹುದು. ಇವರು ಈಗಾಗಲೇ ಶುಲ್ಕ ಕಟ್ಟಿರುವ ಕಾರಣ ಅವರು ಮುಂಗಡ ಶುಲ್ಕ ಕಟ್ಟುವ ಅಗತ್ಯ ಇರುವುದಿಲ್ಲ. ಆದರೆ ಯಾರಿಗೆ ಸೀಟು ಹಂಚಿಕೆಯಾಗಿಲ್ಲವೊ ಅಂತಹವರು ಮುಂಗಡ ಶುಲ್ಕ ಕಟ್ಟಬೇಕು. ಈ ಸುತ್ತಿನಲ್ಲಿ ಸೀಟು ಹಂಚಿಕೆಯಾದರೆ ಪ್ರವೇಶ ಪಡೆಯುವುದು ಕಡ್ಡಾಯವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read