ಬೆಂಗಳೂರು: ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಲಿಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಲಾರೆನ್ಸ್ ಕಾಲೇಜಿನಲ್ಲಿ ಘಟನೆ ನಡೆದಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿ ಆರ್ಯನ್ ಮೋಸಸ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ಕಟ್ಟಡದಿಂದ ಹಾರಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಆರ್ಯ ಕಾಲೇಜು ಸಿಬ್ಬಂದಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಆರ್ಯನ್ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಪೋಷಕರಿಗೆ ಹಸ್ತಾಂತರ ಮಾಡಲಾಗಿದೆ. ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.