ಬೆಂಗಳೂರು: ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಔತಣಕೂಟ ಆಯೋಜಿಸಿದ್ದ ಸಿಎಂ ಹಲವು ಸೂಚನೆ ನೀಡಿದ್ದಾರೆ.
ಹೈಕಮಾಂಡ್ ಸೂಚನೆಯಂತೆ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ ಆಯೋಜಿಸಿದ್ದಾರೆ. ಸಂಪುಟದ ಸಹೋದ್ಯೋಗಿಗಳಿಗೆ ಔತಣಕೂಟದಲ್ಲಿ ಹಲವು ಸೂಚನೆ ನೀಡಿದ್ದಾರೆ. ಪರೋಕ್ಷವಾಗಿ ಸಂಪುಟ ಪುನರಚನೆಯ ಬಗ್ಗೆ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಸಂಪುಟ ಪುನರಚನೆಯ ಬಗ್ಗೆ ಖುದ್ದಾಗಿ ಅವರೇ ಪ್ರಸ್ತಾಪಿಸಿದ್ದಾರೆ. ಪಕ್ಷ ಸಂಘಟನೆ ಜವಾಬ್ದಾರಿ ನೀಡಿದರೆ ತೆಗೆದುಕೊಳ್ಳಲು ಸಿದ್ದರಾಗಿರುವಂತೆ ಸಂಪುಟ ಸಹೋದ್ಯೋಗಿಗಳಿಗೆ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ ಕೆಲವು ಸಚಿವರ ಜೊತೆಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಬಿಹಾರ ಚುನಾವಣೆಯಲ್ಲಿ ಎಲ್ಲರ ಸಹಕಾರ ಇರಲಿ ಎಂದು ಔತಣಕೂಟದಲ್ಲಿ ಭಾಗಿಯಾದ ಕೆಲವು ಸಚಿವರಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಪಕ್ಷದ ಹೈಕಮಾಂಡ್ ನಿಂದ ಯಾವಾಗ ಬೇಕಾದರೂ ಸೂಚನೆ ಬರಬಹುದು. ಹೈಕಮಾಂಡ್ ನಿಂದ ಸೂಚನೆ ಬಂದಾಗ ಪ್ರಚಾರಕ್ಕೆ ಅಲ್ಲಿಗೆ ಹೋಗಬೇಕಾಗುತ್ತದೆ. ಚುನಾವಣೆ ಕೆಲಸಕ್ಕೂ ರೆಡಿ ಇರಬೇಕು. ನಿಮ್ಮ ಎಲ್ಲಾ ಸಹಕಾರವೂ ಬೇಕಿದೆ ಡಿನ್ನರ್ ಮೀಟಿಂಗ್ ನಲ್ಲಿ ಸಚಿವರಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸಚಿವರನ್ನು ಕರೆದು ವೈಯಕ್ತಿಕ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಸಚಿವರದು ಒಂದೊಂದು ಇರುತ್ತೆ. ನನ್ನ ಜೊತೆ ಇಲಾಖೆ ವಿಚಾರವಾಗಿ ಮಾತನಾಡಿದರು. ಸಾಮಾನ್ಯವಾಗಿ ಪ್ರತಿ ವರ್ಷವೂ ಸಭೆ ಕರೆಯುತ್ತಾರೆ. ಸಚಿವ ಸಂಪುಟ ಪುನರಚನೆಯ ವಿಚಾರ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು. ಬಿಹಾರ ವಿಧಾನಸಭೆ ಚುನಾವಣೆಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಔತಣಕೂಟದ ನಂತರ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.