ಬೆಂಗಳೂರು: ಬೆಂಗಳೂರಿನಲ್ಲಿ ಮೊಬೈಲ್ ರಿಚಾರ್ಜ್ ಮಾಡಿಲ್ಲವೆಂದು ಟೆರೇಸ್ ಮೇಲಿನಿಂದ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿಖಾ ದೇವಿ(28) ಆತ್ಮಹತ್ಯೆ ಮಾಡಿಕೊಂಡವರು. ಕುಂಬಳಗೂಡು ಪೊಲೀಸ್ ಠಾಣೆ ವ್ಯಾಪ್ತಿಯ ಗೇರುಪಾಳ್ಯದ ಅಕ್ಟೋಬರ್ 12ರಂದು ಸಂಜೆ 5.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರಪ್ರದೇಶ ಮೂಲದ ಶಿಖಾ ದೇವಿ ಅವರಿಗೆ 2019 ರಲ್ಲಿ ಉತ್ತರ ಪ್ರದೇಶದ ವಿನೋದ್ ಕುಮಾರ್ ಜತೆಗೆ ಮದುವೆಯಾಗಿದ್ದು ಎರಡು ವರ್ಷದ ಹಿಂದೆ ಪತಿ ಜೊತೆಗೆ ಬೆಂಗಳೂರಿಗೆ ಬಂದಿದ್ದರು.
ಕೆಂಗೇರಿಯ ಗೇರುಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪತಿ ಜೊತೆಗೆ ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು. ರಿಚಾರ್ಜ್ ಮಾಡಿಲ್ಲವೆಂದು ಮನೆಯ ಟೆರೇಸ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಖಾ ತಂದೆ ಅನಿಲ್ ಕುಮಾರ್ ನೀಡಿದ ದೂರಿನ ಅನ್ವಯ ಕುಂಬಲಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.