ಬೆಂಗಳೂರು : ತಂದೆ ಬುದ್ದಿ ಮಾತು ಹೇಳಿದ್ದಕ್ಕೆ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪುಲಕೇಶಿನಗರ ನಿವಾಸಿ ಆರ್ಯನ್ ಮೊಸೆಸ್ ವ್ಯಾಸ್ (17) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಪ್ರಾರ್ಥನೆಗೆ ವಿದ್ಯಾರ್ಥಿಗಳನ್ನು ಬಿಟ್ಟ ವೇಳೆ ಆರ್ಯನ್ ಕಾಲೇಜಿನ 2 ನೇ ಮಹಡಿಯಿಂದ ಜಿಗಿದಿದ್ದಾನೆ. ಆರ್ಯನ್ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು.
ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆರ್ಯನ್ ಮೃತಪಟ್ಟಿದ್ದಾನೆ.
ಆರ್ಯನ್ ಪುಲಕೇಶಿನಗರ ಸಮೀಪದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದನು. ಈತ ಪ್ರತಿಭಾವಂತ ಈಜು ಪಟು ಆಗಿದ್ದನು. ಮಗನಿಗೆ ತಂದೆ ಈಜು ಕಲಿಯಲು ಪ್ರೋತ್ಸಾಹ ನೀಡುತ್ತಿದ್ದರು. ಇತ್ತೀಚೆಗೆ ಮಗ ಈಜುವಿನಲ್ಲಿ ನಿರಾಸಕ್ತಿ ಹೊಂದಿದ್ದಾನೆಂದು ತಂದೆ ಬುದ್ದಿ ಮಾತು ಹೇಳಿದ್ದಕ್ಕೆ ಆರ್ಯನ್ ಸೂಸೈಡ್ ಮಾಡಿಕೊಂಡಿದ್ದಾನೆ.ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
You Might Also Like
TAGGED:ವಿದ್ಯಾರ್ಥಿ