ಬೆಂಗಳೂರು : ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡಲು ಸರ್ಕಾರ ಮಸೂದೆ ಮಂಡನೆ ಮಾಡಲು ಸಿದ್ದತೆ ನಡೆಸಿದೆ.
ಹೌದು. ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನಸಹಿತ ಮುಟ್ಟಿನ ರಜೆ ನೀಡುವುದನ್ನು ಜಾರಿ ಮಾಡಲು ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದರೆ ಕಂಪನಿಗಳು ಪಾಲನೆ ಮಾಡಲೇಬೇಕು. ಈ ನೀತಿ ಜಾರಿ ಸಂಬಂಧ ಮಸೂದೆ ಮಂಡಿಸಲಾಗುವುದು ಅಥವಾ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಕಾರ್ಮಿಕ ಸಚಿವರು ತಿಳಿಸಿದ್ದಾರೆ.
ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಖಾಸಗಿ ಕಂಪನಿ, ಕೈಗಾರಿಕಾ ವಲಯದಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತು ಚಕ್ರ ರಜೆ ನೀತಿ 2025 ಜಾರಿಗೆ ತರುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.ಸರ್ಕಾರಿ, ಖಾಸಗಿ ಕಂಪನಿ ಸೇರಿದಂತೆ ಎಲ್ಲಾ ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ನೀಡಲು ತೀರ್ಮಾನ ಕೈಗೊಂಡಿದ್ದಾರೆ.
ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನಸಹಿತ ಮುಟ್ಟಿನ ರಜೆ ನೀಡುವುದನ್ನು ಜಾರಿ ಮಾಡಲು ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದರೆ ಕಂಪನಿಗಳು ಪಾಲನೆ ಮಾಡಲೇಬೇಕು. ಈ ನೀತಿ ಜಾರಿ ಸಂಬಂಧ ಮಸೂದೆ ಮಂಡಿಸಲಾಗುವುದು ಅಥವಾ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಕಾರ್ಮಿಕ ಸಚಿವರಾದ @SantoshSLadINC ತಿಳಿಸಿದ್ದಾರೆ. pic.twitter.com/kC2DAW7ruF
— DIPR Karnataka (@KarnatakaVarthe) October 13, 2025