ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 10 ಲಕ್ಷ ಮೌಲ್ಯದ ಪಟಾಕಿ ಜಪ್ತಿ ಮಾಡಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಲೈಸೆನ್ಸ್ ಪಡೆಯದೇ ಅಕ್ರಮವಾಗಿ ಪಟಾಕಿ ಸಂಗ್ರಹಿಸಿಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಪಟಾಕಿ ಜಪ್ತಿ ಮಾಡಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಕುಂಬಳಗೋಡು ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಈಗಷ್ಟೇ ಪಟಾಕಿ ಮಾರಾಟಗಾರರು ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದ್ದಾರೆ.