ವಿಜಯಪುರ: ವಿಜಯಪುರ ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಆರೋಪಿ ಅಕ್ಷಯ್ ಜುಲಜುಲೆ ಎಂಬಾತನ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕನ್ನೂರು ಗ್ರಾಮದಲ್ಲಿ ಸಾಗರ ಬೆಳುಂಡಗಿ ಹಾಗೂ ಇಸಾಕ್ ಖುರೇಷಿ ಎಂಬ ಇಬ್ಬರು ಯುವಕರನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿತ್ತು. ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐವರು ಆರೋಪಿಗಳ ಬಂಧನಕ್ಕಾಗಿ ಪೊಲೀಸರು ವಿಜಯಪುರದ ಕನ್ನೂರು ಗ್ರಾಮದ ಹೊರವಲಯಕ್ಕೆ ತೆರಳಿದ್ದರು.
ಈ ವೇಳೆ ಪ್ರಕರಣದ ಪ್ರಮುಖ ಆರೋಪಿಅಕ್ಷಯ್ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಆತನ ಕಾಲಿಗೆ ಗುಂಡೇಟು ಹಾರಿಸಿ ಬಂಧಿಸಲಾಗಿದೆ. ಗಾಯಾಳು ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.