ಬೆಂಗಳೂರು : ಬೆಂಗಳೂರಲ್ಲಿ ಜಾತಿ ಗಣತಿ ಸಮೀಕ್ಷೆಗೆ ಗೈರಾದ ಶಿಕ್ಷಕರಿಗೆ ಬಿಗ್ ಶಾಕ್ ಎದುರಾಗಿದ್ದು, ವೇತನ ಕಡಿತ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಜಿಬಿಎ ವ್ಯಾಪ್ತಿಯಲ್ಲಿ 2300 ಸಿಬ್ಬಂದಿ ಗೈರಾಗಿದ್ದು, ಗೈರಾದ ಸಿಬ್ಬಂದಿಗಳ ವೇತನ ಕಡಿತಕ್ಕೆ ಚಿಂತನೆ ನಡೆಸಲಾಗಿದೆ. ಸದ್ಯ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 18 ಸಾವಿರ ಮಂದಿ ಸಿಬ್ಬಂದಿ ಮಾತ್ರ ಸಮೀಕ್ಷೆಗೆ ಹಾಜರಾಗಿದ್ದಾರೆ.ಜಾತಿ ಗಣತಿ ಸಮೀಕ್ಷೆಗೆ ಗೈರಾದ ಸಿಬ್ಬಂದಿಗಳ ವೇತನ ಕಡಿತಕ್ಕೆ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.
ಜಾತಿ ಗಣತಿ ಸಮೀಕ್ಷೆಗೆ ಆನ್ ಲೈನ್ ನಲ್ಲಿ ಭಾಗವಹಿಸಲು ನೀವು ಜಸ್ಟ್ ಹೀಗೆ ಮಾಡಿ.
ಹೌದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನೀವು ಆನ್ಲೈನ್ ಮೂಲಕವೂ ಪಾಲ್ಗೊಳ್ಳಬಹುದು.
https://kscbcselfdeclaration.karnataka.gov.in ವೆಬ್ಸೈಟ್ಗೆ ಭೇಟಿ ನೀಡಿ, ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿ. ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಲು ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನೀವು ಆನ್ಲೈನ್ ಮೂಲಕವೂ ಪಾಲ್ಗೊಳ್ಳಬಹುದು.https://t.co/tfZL0fQcrI ವೆಬ್ಸೈಟ್ಗೆ ಭೇಟಿ ನೀಡಿ, ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿ. ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಲು ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ. pic.twitter.com/wf2uLDzPXh
— DIPR Karnataka (@KarnatakaVarthe) October 13, 2025