ಬೆಂಗಳೂರು: ಆರ್.ಎಸ್.ಎಸ್ ಚಟುವಟಿಕಳ ನಿಷೇಧ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ವಿಚಾರವಾಗಿ ಕಿಡಿಕಾರಿದ್ದ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ, ಪ್ರಿಯಾಂಕ್ ಖರ್ಗೆ ಅವರಿಗೆ ಆರ್.ಎಸ್. ಎಸ್ ಬಗ್ಗೆ ಮಾಹಿತಿ ಇಲ್ಲ, ಅವರು ನನ್ನೊಂದಿಗೆ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ್ದರು.
ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿಯವರದ್ದು ಡ್ರಾಮಾ ಕಂಪನಿ. ಸಿ.ಟಿ.ರವಿ, ಪ್ರಿಯಾಂಕ್ ಖರ್ಗೆ ಅವರಿಗೆ ಚರ್ಚೆಗೆ ಬನ್ನಿ ಎಂದು ಆಹ್ವಾನ ನೀಡಿದ್ದಾರೆ. ಆದರೆ ಸಿ.ಟಿ.ರವಿ ಅವರಿಗೆ ನಾನು ಆಹ್ವಾನ ನೀಡುತ್ತಿದ್ದೇನೆ. ಸಿ.ಟಿ.ರವಿ ಅವರೇ ನೀವು ಮೊದಲು ನನ್ನ ಜೊತೆ ಚರ್ಚೆಗೆ ಬಂದು ಗೆಲ್ಲಿ. ಬಳಿಕ ನಾನೇ ನಿಮ್ಮನ್ನು ಪ್ರಿಯಾಂಕ್ ಖರ್ಗೆ ಅವರ ಬಳಿ ಕರೆದುಕೊಂಡು ಹೋಗುತ್ತೇನೆ ಎಂದು ಸವಾಲು ಹಾಕಿದ್ದಾರೆ.