ಅ.16 ರಂದು ಬಳ್ಳಾರಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಆಗಮನ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಭಾರತ ಸರ್ಕಾರದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 16 ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಮಧ್ಯಾಹ್ನ 01.45 ಗಂಟೆಗೆ ಸಿರುಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದ ಗ್ರಾಮ ಪಂಚಾಯತ್ ನ ಗ್ರಂಥಾಲಯಕ್ಕೆ ಭೇಟಿ ನೀಡುವರು.

ಬಳಿಕ ಮಧ್ಯಾಹ್ನ 03 ಗಂಟೆಗೆ ಸಿರುಗುಪ್ಪ ತಾಲ್ಲೂಕಿನ ಕೊಂಚಿಗೇರಿ ಗ್ರಾಮದಲ್ಲಿ ಏರ್ಪಡಿಸಿರುವ ಸಂಸದೀಯ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ ರೈತರಿಗೆ ಸ್ಥಳೀಯ ಕೃಷಿ ತರಬೇತಿ ಕೇಂದ್ರ ಮತ್ತು ಕೃಷಿ ಸಂಸ್ಕರಣೆ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರ ಸಂಜೆ 04.45 ಗಂಟೆಗೆ ಬಳ್ಳಾರಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಮುಖ್ಯ ಕಚೇರಿಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಪ್ರಗತಿ ಪರಿಶೀಲನೆ ನಡೆಸುವರು. ಬಳಿಕ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಅ.17 ರಂದು ಬಳ್ಳಾರಿಯಿಂದ ವಿಜಯನಗರ ಜಿಲ್ಲೆಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read