BREAKING : ಮಣ್ಣಲ್ಲಿ ಮಣ್ಣಾದ ನಟ ರಾಜು ತಾಳಿಕೋಟೆ , ‘ಹಾಸ್ಯ ಸಾಮ್ರಾಟ’ ಇನ್ನೂ ನೆನಪು ಮಾತ್ರ.!


ವಿಜಯಪುರ : ಸ್ಯಾಂಡಲ್ ವುಡ್ ನಟ, ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ(60) ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಅವರ ಅಂತ್ಯಕ್ರಿಯೆ ನೆರವೇರಿದೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕ ಸಿಂದಗಿ ಗ್ರಾಮದಲ್ಲಿರುವ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಹೆಬ್ರಿಯ ಕಬ್ಬಿನಾಲೆಯಲ್ಲಿ ಚಿತ್ರೀಕರಣದ ವೇಳೆ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ತಾಳಿಕೋಟೆಯವರಾದ ರಾಜು ತಾಳಿಕೋಟೆ(ರಾಜೇಸಾಬ್ ಮುಕ್ತುಮ್ ಸಾಬ್) ಅವರು ನಟ ಶೈನ್ ಶೆಟ್ಟಿ ಅವರ ‘ಶಂಕರಾಭರಣ’ ಸಿನಿಮಾ ಚಿತ್ರೀಕರಣಕ್ಕಾಗಿ ಉಡುಪಿಗೆ ಆಗಮಿಸಿದ್ದರು. ಭಾನುವಾರ ತಡರಾತ್ರಿ ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಬ್ರಿ ಆಸ್ಪತ್ರೆಗೆ ಅವರನ್ನು ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.ತುರ್ತಾಗಿ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ರಾಜು ತಾಳಿಕೋಟಿಯವರು ಕನ್ನಡ ನಾಟಕ ಮತ್ತು ಚಲನಚಿತ್ರ ಹಾಸ್ಯ ನಟ. (ಮೂಲ ಹೆಸರು: ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ). ಇವರು ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದವರು. ಮನಸಾರೆ,ಪಂಚರಂಗಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಇವರು ಬಣ್ಣ ಹಚ್ಚಿದ್ದಾರೆ. ಇವರ ವಿಭಿನ್ನ ಮಾತಿನ ಶೈಲಿಗೆ ಸಿನಿರಸಿಕರು ಫಿದಾ ಆಗಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read