ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಇಲಾಖಾ ತನಿಖೆಗೆ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಆದೇಶ ಹೊರಡಿಸಿದೆ. ಈ ಮೂಲಕ ಅಲೋಕ್ ಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ.
ಸರ್ಕಾರದ ಇಲಾಖಾ ತನಿಖೆ ಆದೇಶ ಪ್ರಶ್ನಿಸಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ವಿಚಾರಣೆ ವೇಳೆ ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ಸಿಎಟಿ ಮುಖ್ಯಸ್ಥ ನ್ಯಾಯಮೂರ್ತಿ ರಣಜಿತ್ ಬಳಿ ಹೋಗಿತ್ತು. ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ರಣಜಿತ್ ಇಂದು ತೀರ್ಪು ಪ್ರಕಟಿಸಿದ್ದಾರೆ.
ಅಲೋಕ್ ಕುಮಾರ್ ವಿರುದ್ಧ ಸರ್ಕಾರದ ಇಲಾಖಾ ತನಿಖೆ ಆದೇಶ ರದ್ದುಗೊಳಿಸಿದ್ದು, ಅಲೋಕ್ ಕುಮಾರ್ ಅವರಿಗೆ ಸಲ್ಲಬೇಕಾದ ಬಡ್ತಿ ಸವಲತ್ತು ನೀಡುವಂತೆ ಆದೇಶ ಹೊರಡಿಸಿದ್ದಾರೆ.