ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಕೊತ್ತಲವಾಡಿ ಬಳಿಯ ಮೆಲ್ಲೂರು ಬಳಿ ಜಮೀನಿನಲ್ಲಿ ನಡೆದಿದೆ.
ಸ್ವಾಮಿ (52) ಹಾಗೂ ಕೃಷ್ಣಶೆಟ್ಟಿ (50) ಮೃತ ದುರ್ದವಿಗಳು. ತೆಂಗಿನ ತೋಟದಲ್ಲಿ ಕಾಯಿ ಕೀಳಲೆಂದು ಹೋಗಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರೂ ಸಾವನ್ನಪ್ಪಿದ್ದಾರೆ.
ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.