BREAKING: ನಾಳೆಯಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ KSRTC ಬಿಗ್ ಶಾಕ್

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ 5 ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆ.ಎಸ್.ಆರ್.ಟಿಸಿ ಬಿಗ್ ಶಾಕ್ ನೀಡಿದೆ.

ನಾಳೆಯಿಂದ ಐದು ದಿನಗಳಕಾಲ ಸಾರ್ಹೆ ನೌಕರರಿಗೆ ರಜೆ ರದ್ದು ಮಾಡಿ ಕೆ.ಎಸ್.ಆರ್.ಟಿ.ಸಿ ಆದೇಶ ಹೊರಡಿಸಿದೆ. ಸಾರಿಗೆ ಸಂಸ್ಥೆ ಸಾರ್ವಜನಿಕರ ಉಪಯುಕ್ತ ಸೇವಾಸಂಸ್ಥೆ. ಹೀಗಾಗಿ ಜನರಿಗೆ ಸಮರ್ಪಕ ಸೇವೆ ಒದಗಿಸುವುದು ನಿಗಮದ ಕರ್ತವ್ಯ. ನಾಳೆಯಿಂದ ಅಕ್ಟೋಬರ್ 19ರವರೆಗೆ ಉಪವಾಸ ಸತ್ಯಾಗ್ರಹದ ಅವಧಿಯಲ್ಲಿ ಸಾರಿಗೆ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಬಾರದು. ಅನಿವಾರ್ಯ ಸಂದರ್ಭ ಹೊರತುಪಡಿಸಿ ಯಾರಿಗೂ ರಜೆ ಇರುವುದಿಲ್ಲ. ನೋ ವರ್ಕ್, ನೋ ಪೇ ನಿಯಮ ಜಾರಿಗೊಳಿಸಿ ಆದೇಶ ಹೊರಡಿಸಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ನಿಗಮಗಳ ಸಾರಿಗೆ ನೌಕರರು ನಾಳೆಯಿಂದ ಐದು ದಿನಗಳ ಕಾಲ ಮೊದಲ ಹಂತದ ಹೋರಾಟ ನಿಟ್ಟಿನಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಈ ನಡುವೆ ಕೆ.ಎಸ್.ಆರ್.ಟಿ.ಸಿ ಸಾರಿಗೆ ನೌಕರರ ರಜೆ ರದ್ದು ಮಾಡಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read