ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಮುನ್ನ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ ನೀಡಿರುವ ರಾಜ್ಯ ಸರ್ಕಾರ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೇಕಡ 2ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದ್ದು, ಒಂದೆರಡು ದಿನಗಳಲ್ಲಿ ಸರ್ಕಾರದ ಆದೇಶ ಹೊರಬೀಳಲಿದೆ. 2025ರ ಜುಲೈ 1 ರಿಂದ ಪೂರ್ವನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.