BREAKING : ಬೆಂಗಳೂರಿನ ಜನತೆಗೆ ದೀಪಾವಳಿ ಗಿಫ್ಟ್ : ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್ ಆರಂಭ.!

ಬೆಂಗಳೂರು : ಬೆಂಗಳೂರಿನ ಜನತೆಗೆ ದೀಪಾವಳಿ ಗಿಫ್ಟ್ ಸಿಕ್ಕಿದ್ದು, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್ ಆರಂಭವಾಗಿದೆ.

ಇನ್ಮುಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಸುಲಭ! ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬೆಂಗಳೂರಿನ ನಾಗರಿಕರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾವನ್ನು ಆನ್ಲೈನ್ನಲ್ಲೇ ಪಡೆಯುವುದಕ್ಕೆ ಇಂದು ಚಾಲನೆ ನೀಡಲಾಯಿತು. 2000 ಚ.ಮೀ.ಗಳವರೆಗಿನ ನಿವೇಶನಗಳಿಗೆ https://bbmp.karnataka.gov.in/BtoAKhata ವೆಬ್ಸೈಟ್ನಲ್ಲಿ ಹಾಗೂ 2000 ಚ.ಮೀ.ಗೂ ಹೆಚ್ಚಿನ ನಿವೇಶನಗಳಿಗೆ https://bpas.bbmp.gov.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. ಇದರಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದ್ದು, ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ತಾಪತ್ರಯ ಕಡಿಮೆ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read