ಬೆಂಗಳೂರು : ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮಾಡಲು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 01ನೇ ನವೆಂಬರ್ 2025ರ ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ (ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಈ ಕೆಳಗೆ ಸೂಚಿಸಿದಂತೆ ಮಾನ್ಯ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ.. ಅನಾರೋಗ್ಯ ಅಥವಾ ಇತರೆ ಕಾರಣಗಳಿಂದಾಗಿ ಮಾನ್ಯ ಸಚಿವರು ಧ್ವಜಾರೋಹಣ ಕಾರ್ಯಕ್ರಮಕ್ಕೆ ಅನುಪಸ್ಥಿತರಿದ್ದಲ್ಲಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡತಕ್ಕದ್ದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

