ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದ, ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ವೈದ್ಯ ಹತ್ಯೆ ಮಾಡಿದ ಘಟನೆ ನಡೆದಿದೆ. ಕೃತಿಕಾ ಎಂಬ ಮಹಿಳೆಯನ್ನು ಡಾಕ್ಟರ್ ಮಹೇಂದ್ರ ಎಂಬುವವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ತನ್ನ ವೈದ್ಯಕೀಯ ಬುದ್ದಿ ಬಳಸಿ ಕೊಲೆ ಮಾಡಿದ ಮಹೇಂದ್ರ ಬಳಿಕ ನ್ಯಾಚುರಲ್ ಡೆತ್ ಆಗಿದೆ ಎಂದು ಎಲ್ಲರನ್ನು ನಂಬಿಸಿದ್ದರು. ಎಫ್ ಎಸ್ ಎಲ್ ವರದಿ ಬಂದ ಬಳಿಕ ಸಾವಿನ ರಹಸ್ಯ ಬಯಲಾಗಿದೆ. ಎಫ್ ಎಸ್ ಎಲ್ ವರದಿ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ ಡಾ. ಮಹೇಂದ್ರ ರೆಡ್ಡಿಯನ್ನು ಬಂಧಿಸಿದ್ದಾರೆ. ಕೊಲೆಯಾದ 6 ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಪತ್ನಿ ಕೃತಿಕಾ ರೆಡ್ಡಿ ಕೂಡ ವೈದ್ಯೆಯಾಗಿದ್ದರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮದುವೆಯಾದ 11 ತಿಂಗಳ ಬಳಿಕ ಪತಿ ಪತ್ನಿಯ ಹತ್ಯೆಗೆ ಸ್ಕೆಚ್ ಹಾಕಿದ್ದನು.
20 :05: 2024 ರಲ್ಲಿ ಡಾ.ಮಹೇಂದ್ರ ರೆಡ್ಡಿ ಹಾಗೂ ಕೃತಿಕಾ ಮದುವೆಯಾಗಿದ್ದರು. ಕೃತಿಕಾ ರೆಡ್ಡಿಗೆ ಅಜೀರ್ಣ, ಗ್ರ್ಯಾಸ್ಟ್ರಿಕ್ ಸೇರಿ ಮುಂತಾದ ಸಮಸ್ಯೆಯಿತ್ತು. ಹುಷಾರಿಲ್ಲದೇ ಮನೆಯಲ್ಲಿ ಮಲಗಿದ್ದ ಕೃತಿಕಾಗೆ ಮಹೇಂದ್ರ ಒಂದು ಇಂಜೆಕ್ಷನ್ ನೀಡಿದ್ದರು. ಆ ಇಂಜೆಕ್ಷನ್ ನಿಂದ ಕೃತಿಕಾ ಮೃತಪಟ್ಟಿದ್ದರು. ಮೊದಲು ಕುಟುಂಬದವರಿಗೆ ಈ ಬಗ್ಗೆ ಗೊತ್ತಿರಲಿಲ್ಲ. ನನ್ನ ಮಗಳು ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ ಎಂದು ಪೋಷಕರು ನಂಬಿದ್ದರು. ನಂತರ ಪೊಲೀಸರು ತನಿಖೆ ನಡೆಸಿದಾಗ ಸಾವಿನ ರಹಸ್ಯ ಬಯಲಾಗಿದೆ.