BREAKING : ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ.!

ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ದೇವಿಯ ದರ್ಶನ ಪಡೆದರು. ಸಿಎಂ ಸಿದ್ದರಾಮಯ್ಯ ಅವರು ಹಾಸನಾಂಬಾ ದೇವಿ ಮತ್ತು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು
.

ಹಾಸನಾಂಬ ಜಾತ್ರೆಯಲ್ಲಿ ಯಾವುದೇ ರೀತಿಯ ವಿಐಪಿ ಸಂಸ್ಕೃತಿಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆದ್ಯತೆ ನೀಡಿದ ನಮ್ಮ ಸರ್ಕಾರದ ಪ್ರಯತ್ನವನ್ನು ಯಶಸ್ವಿಯಾಗಿಸಲು ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಅಭಿನಂದನೆಗಳು.

ನಾನು ಕಳೆದ ವರ್ಷವೂ ಬಂದು ದೇವರ ದರ್ಶನ ಪಡೆದಿದ್ದೆ, ಈ ವರ್ಷವೂ ದರ್ಶನ ಪಡೆದಿದ್ದೇನೆ. ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿಗಾಗಿ, ಮಳೆ- ಬೆಳೆ – ರೈತರ ಸಮೃದ್ಧಿಗಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ.
ಈ ಬಾರಿ ಅಗತ್ಯಕ್ಕಿಂತ ಹೆಚ್ವು ಮಳೆ ಬಿದ್ದು ರೈತರಿಗೆ ಆಗಿರುವ ನಷ್ಟ ಭರಿಸಲು ಎನ್ಡಿಆರ್ಎಫ್ ನಿಧಿ ಜೊತೆಗೆ ರಾಜ್ಯ ಸರ್ಕಾರದಿಂದಲೂ ಹೆಚ್ಚುವರಿ ಪರಿಹಾರ ನೀಡುತ್ತಿದ್ದೇವೆ. ಹಿಂದೆಂದೂ ಯಾರೂ ನೀಡದಷ್ಟು ಬೆಳೆ ಹಾನಿ ಪರಿಹಾರವನ್ನು ನಾವು ನೀಡಿದ್ದೇವೆ. ಮುಂದಿನ ವರ್ಷ ಬೆಳೆ ಹಾನಿ ಪರಿಸ್ಥಿತಿ ಬಾರದಿರಲಿ ಎಂದು ಹಾಸನಾಂಬ ಮತ್ತು ಸಿದ್ದೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ.

ನಮ್ಮದು ಕುವೆಂಪು ಅವರ ಆಶಯದ “ಸರ್ವ ಜನಾಂಗದ ಶಾಂತಿಯ ತೋಟ” ಆಗಿದೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸೋಣ. ಎಲ್ಲಾ ಧರ್ಮಗಳ ಸಾರವೇ ಮನುಷ್ಯ ಪ್ರೀತಿ ಮತ್ತು ಸೌಹಾರ್ದತೆಯ ಬದುಕು. ಇದಕ್ಕೆ ತಕ್ಕಂತೆ ನಾವೆಲ್ಲರೂ ಸಹೃದತೆಯಿಂದ ಮನುಷ್ಯ ಧರ್ಮವನ್ನು ಪಾಲಿಸಬೇಕು.ಹಾಸನಾಂಬ ಜಾತ್ರೆಗೆ ಹೆಚ್ಚುವರಿ ಅನುದಾನ ಅಗತ್ಯತೆಯ ಬಗ್ಗೆ ಜಿಲ್ಲಾಡಳಿತದ ಜೊತೆ ಚರ್ಚಿಸುತ್ತೇನೆ. ಅಗತ್ಯಬಿದ್ದರೆ ಅನುದಾನ, ಇತರೆ ನೆರವು ನೀಡಲಾಗುವುದು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read