BIG NEWS: ಹೊಸದಾಗಿ 800 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ: ಮಧು ಬಂಗಾರಪ್ಪ

ಬೆಂಗಳೂರು: ಪ್ರಪ್ರಥಮ ಬಾರಿಗೆ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (KPS) ಉನ್ನತೀಕರಣ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ ಒಟ್ಟು 800 ಸರ್ಕಾರಿ ಶಾಲೆಗಳನ್ನು ಒಂದೇ ಬಾರಿಗೆ ಉನ್ನತೀಕರಿಸಿ, ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (Karnataka Public Schools) ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ, ಪ್ರತಿ ಶಾಲೆಯನ್ನು ₹4.00ಕೋಟಿ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಸದರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೆ ಒಂದೇ ಸೂರಿನಡಿ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಮೊದಲ ಹಂತದಲ್ಲಿ, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಸಹಯೋಗದೊಂದಿಗೆ ರಾಜ್ಯ ಸರ್ಕಾರದ ವತಿಯಿಂದ 500 ಶಾಲೆಗಳನ್ನು KPS ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದರ ಜೊತೆಗೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ನಿಧಿಯ ಮೂಲಕ 200 ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು. ಹಾಗೆಯೇ, ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ (CEPMIZ) ವತಿಯಿಂದ 10 ತಾಲೂಕುಗಳಲ್ಲಿ 100 KPS ಶಾಲೆಗಳನ್ನು ಉನ್ನತೀಕರಿಸಲು ಪ್ರತ್ಯೇಕ ಡಿ.ಪಿ.ಆರ್ ತಯಾರಿಸಲಾಗುವುದು ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2 ರಿಂದ 3  KPS ಶಾಲೆಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರತಿ ತಾಲೂಕಿನಲ್ಲಿ 4 to 5 KPS ಶಾಲೆಗಳನ್ನಾಗಿ ಉನ್ನತೀಕರಣ ಮಾಡಲಾಗುವುದು. ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಶಿಕ್ಷಣ ಸುಧಾರಣಾ ಸಮಿತಿಯನ್ನು ರಚಿಸಲಾಗುವುದು. ಈ ಮಹತ್ವಾಕಾಂಕ್ಷೆಯ ಯೋಜನೆಯು ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಿ, ಗುಣಮಟ್ಟದ ಶಿಕ್ಷಣವನ್ನು ನೀಡಲು ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶೈಕ್ಷಣಿಕ ವಾತಾವರಣವನ್ನು ಒದಗಿಸುವಲ್ಲಿ KPS ಶಾಲೆಗಳು ಪ್ರಮುಖ ಪಾತ್ರವಹಿಸಲು ಸಹಕಾರಿಯಾಗಲಿವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read