BIG NEWS: ಇಂದು ವಿಜಯಪುರ ಜಿಲ್ಲಾ ಬಂದ್: ಶಾಲೆಗಳಿಗೆ ರಜೆ

ವಿಜಯಪುರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣ ಖಂಡಿಸಿ ಇಂದು ವಿಜಯಪುರ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ.

ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಒಕ್ಕೂಟ, ವಿದ್ಯಾರ್ಥಿಗಳು, ದಲಿತ ಸಂಘಟನೆಗಳ ಒಕ್ಕೂಟ, ರೈತರು, ಕಾರ್ಮಿಕರು, ಬಸವ ಬಳಗ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಇಂದು ವಿಜಯಪುರ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ಸಿದ್ದೇಶ್ವರ ದೇವಾಲಯದಿಂದ ಅಂಬೇಡ್ಕರ್ ವೃತ್ತದ ವರೆಗೆ ಪ್ರತಿಭಟನೆ ನಡೆಸಲಾಗುವುದು.

ಇಂದು ಬೆಳಗ್ಗೆಯಿಂದ ಸಂಜೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಸಂಚರಿಸುವ 811 ಬಸ್ ಗಳ ಸೇವೆ ಸ್ಥಗಿತಕ್ಕೆ ಮನವಿ ಮಾಡಲಾಗಿದೆ. ಹೊರ ಜಿಲ್ಲೆಯಿಂದ ಬರುವ 3500 ಬಸ್ ಗಳ ಸಂಚಾರ ಸ್ಥಗಿತಗೊಳಿಸುವಂತೆ ಮನವಿ ಮಾಡಲಾಗಿದೆ. ಪರಿಸ್ಥಿತಿ ನೋಡಿ ಬಸ್ ಗಳನ್ನು ರಸ್ತೆಗಿಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಹೇಳಿದ್ದಾರೆ.

ಸರ್ಕಾರಿ ಶಾಲೆಗಳಿಗೆ ರಜೆ ಇದೆ. ಖಾಸಗಿ ಶಾಲೆಯವರು ನಿರ್ಧಾರ ಪ್ರಕಟಿಸಬೇಕು. ಶಾಂತಿಯುತ ಪ್ರತಿಭಟನೆಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆನಂದ್ ಮಾಹಿತಿ ನೀಡಿದ್ದಾರೆ.

ಮಧ್ಯಾಹ್ನ 3 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್ ಗೆ ಸಹಕಾರ ನೀಡುವಂತೆ ವ್ಯಾಪಾರಿಗಳಿಗೆ ಸಂಘಟನೆಯ ಮುಖಂಡರು ಮನವಿ ಮಾಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಬಂದೋಬಸ್ತ್ ಗಾಗಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸುವಂತೆ ಪೊಲೀಸ್ ಅಧಿಕಾರಿಗಳು ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read