ಬೆಂಗಳೂರು : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಇಂದು ಸಂಜೆ ಜೆಡಿಎಸ್ ಕೋರ್ ಕಮಿಟಿ ಸಭೆ ಕರೆದಿದ್ದಾರೆ.
ಬೆಂಗಳೂರಿನ ಜೆಪಿ ನಗರದಲ್ಲಿರುವ ನಿವಾಸದಲ್ಲಿ ಇಂದು ಸಂಜೆ ಸಭೆ ನಡೆಯಲಿದೆ. ಪಕ್ಷ ಸಂಘಟನೆ, ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ, ರಾಜ್ಯ ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್ ಪ್ರಮುಖರ ಜೊತೆ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಆರೋಗ್ಯ ಸಮಸ್ಯೆಯಿಂದ ಕುಮಾರಸ್ವಾಮಿ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಇದೀಗ ಅವರು ಚೇತರಿಸಿಕೊಂಡಿದ್ದು, ಹಂತ ಹಂತವಾಗಿ ಪಕ್ಷದ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.