HomeLatest NewsRAIN ALERT: ಒಂದು ವಾರಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ...

RAIN ALERT: ಒಂದು ವಾರಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದಿನಿಂದ ಅಕ್ಟೋಬರ್ 27ರವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನ ಸುತ್ತಮುತ್ತ ದಟ್ಟ ಮೋಡಕವಿದ ವಾತಾವರಣವಿರಲಿದೆ. ಅಲ್ಲದೇ ಹಗುರದಿಂದ ಕೂಡಿದ ಗುಡುಗು ಮಳೆಯಾಗಲಿದೆ.

ಕೋಲಾರ, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ,ರಾಯಚೂರು, ಯಾದಗಿರಿ, ಕೊಪ್ಪಳ, ಗದಗ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular