ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ ಆರೋಪಿ ಗುರುತು ಪತ್ತೆಯಾಗಿದ್ದು, ಆತನನ್ನು ಬಂಧಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ವ್ಯಕ್ತಿಯೋರ್ವ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದು, ದಾನೇಶ್ ನರೋಣ ಎಂಬಾತನನ್ನು ಬಂಧಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.
ನನಗೆ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಿದ್ದ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆ ಬೆದರಿಕೆ ಕರೆಯ ವಿಡಿಯೋ ರಿಲೀಸ್ ಮಾಡಿದ್ದರು.