ಬಳ್ಳಾರಿ: ಮಾಜಿ ಸಚಿವ, ಶಾಸಕ ಬಿ.ನಾಗೇಂದ್ರ ಅವರ ಆಪ್ತನ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಆಪ್ತ ಕುರುಬ ನಾಗರಾಜ್ ಅವರ ಬಳ್ಳಾರಿಯಲ್ಲಿರುವ ನಿವಾಸ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ತಳೂರು ರಸ್ತೆಯಲ್ಲಿರುವ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.