ಚಿಕ್ಕಮಗಳೂರು : ಭದ್ರಾ ನಾಲೆಗೆ ಹಾರಿ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ನಡೆದಿದೆ.
ನಾಲೆಗೆ ಹಾರಿ ವಿಠ್ಠಲ್ ರಾವ್ (48) ಗಂಗಮ್ಮ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಭದ್ರಾವತಿ ತಾಲೂಕಿನ ಗೌಳಿಗಾರ ಕ್ಯಾಂಪ್ ನ ನಿವಾಸಿಗಳು ಎಂದು ಗುರುತಿಸಲಾಗಿದೆ.
ಜಗದಾಂಬೆ ದೇವಸ್ಥಾನಕ್ಕೆ ಪೂಜೆಗೆ ಬಂದಿದ್ದ ವಿಠ್ಠಲ್ ರಾವ್, ಗಂಗಮ್ಮ ಸೂಸೈಡ್ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.