ಬೆಂಗಳೂರು : ಇನ್ಮುಂದೆ ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ ವಿಧಿಸುವ ಹೊಸ ಮಸೂದೆ ಮಂಡನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಆರ್ ಎಸ್ ಎಸ್ ಚಟುವಟಿಕೆ ನಿಷೇಧ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಹೊಸ ಮಸೂದೆ ಮೂಲಕ ಸರ್ಕಾರಿ ಸ್ಥಳಗಳಲ್ಲಿ ಇನ್ಮುಂದೆ ‘RSS’ ಕಾರ್ಯಕ್ರಮ ನಡೆಸಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿದೆ. ಈ ಹೊಸ ಮಸೂದೆಯನ್ನು ಸರ್ಕಾರ ಶೀಘ್ರವೇ ಮಂಡಿಸೋ ಸಾಧ್ಯತೆ ಇದೆ ಎನ್ನಲಾಗಿದೆ.