BREAKING: ಯಾವುದೇ ಸಂಘಟನೆಯನ್ನು ನಾವು ನಿಷೇಧಿಸುತ್ತಿಲ್ಲ; ಆದರೆ ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಕಡ್ಡಾಯ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸರ್ಕಾರಿ ಜಾಗಗಳಲ್ಲಿ ಆರ್.ಎಸ್.ಎಸ್ ಸೇರಿದಂತೆ ಯಾವುದೇ ಸಂಘ-ಸಂಸ್ಥೆಗಳು ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ, ಇಂತಹ ಕಾರ್ಯಕ್ರಮಗಳನ್ನು ನಡೆಸಲು ಪೂರ್ವಾನುಮತಿ ಕಡ್ಡಾಯವಾಗಿರುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಯಾವುದೇ ಸಂಘಟನೆಯನ್ನು ನಾವು ನಿಷೇಧ ಮಾಡಲು ಆಗುವುದಿಲ್ಲ. ಸಂಘ-ಸಂಸ್ಥೆಗಳು ಸರ್ಕಾರಿ ಜಾಗಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮನಸ್ಸಿಗೆ ಬಂದಂತೆ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಸರ್ಕಾರಿ ಆವರಣಗಳಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಕಡ್ಡಾಯ ಮಾಡಲಗುವುದು ಎಂದರು.

ಈ ನಿಟ್ಟಿನಲ್ಲಿ ಹೊಸ ನಿಯಮಗಳನ್ನು ಕಾನೂನಾತ್ಮಕವಾಗಿ ಜಾರಿಗೆ ತರಲಾಗುವುದು. ಸರ್ಕಾರಿ, ಸರ್ವಜನಿಕ ಸ್ಥಳಗಳಲ್ಲಿ ಲಾಠಿ ಬೀಸುವುದು, ಪಥ ಸಂಚಲನ ಹೋಗುವುದು ಮಾಡುವಂತಿಲ್ಲ. ಸಾರ್ವಜನಿಕ ಆಸ್ತಿಗಳಲ್ಲಿ ಹೇಗಿರಬೇಕು ಎಂಬುದನ್ನು ನಾವು ಹೇಳುತ್ತೇವೆ. ಈ ನಿಟ್ಟಿನಲ್ಲಿ ನಿಯಮಗಳನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read