ಅಹಮದಾಬಾದ್: ಮಹತ್ವದ ಬೆಳವಣಿಗೆಯೊಂದರಲ್ಲಿ ಗುಜರಾತ್ ಸರ್ಕಾರದ ಎಲ್ಲಾ ಸಚಿವರು ದಿಢೀರ್ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಹೊರತುಪಡಿಸಿ ಉಳಿದೆಲ್ಲಾ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಭೂಪೇಂದ್ರ ಪಟೇಲ್ ನಿವಾಸಲ್ಲಿ ಇಂದು ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಸಭೆ ಬಳಿಕ ಎಲ್ಲಾ ಸಚಿವರು ಸಿಎಂ ಪಟೇಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ನಾಳೆ ಗುಜರಾತ್ ಸರ್ಕಾರದ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಒಟ್ಟಾರೆ ಗುಜರಾತ್ ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದೆ.