ಬೆಳೆ ಹಾನಿಗೊಳಗಾದ ರೈತರಿಗೆ ಗುಡ್ ನ್ಯೂಸ್: ಹೆಕ್ಟೇರ್ ಗೆ 31 ಸಾವಿರ ರೂ. ಪರಿಹಾರ ನೀಡಲು ಸಂಪುಟ ನಿರ್ಧಾರ

ಬೆಂಗಳೂರು: ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೀಡಾಗಿರುವ 12.82 ಲಕ್ಷ ಹೆಕ್ಟೇರ್‌ಗಳಷ್ಟು ಕೃಷಿ ಮತ್ತು ತೋಟಗಾರಿಕಾ ಬೆಳೆಗೆ ಹೆಚ್ಚಿನ ಪರಿಹಾರ ವಿತರಣೆಗೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮಳೆಯಾಶ್ರಿತ ಬೆಳೆಗೆ ಎಸ್‌ಡಿಆರ್‌ಎಫ್‌/ ಎನ್‌ಡಿಆರ್‌ಎಫ್‌ ಮಾನದಂಡಗಳ ಪ್ರಕಾರ ಪ್ರತಿ ಹೆಕ್ಟೇರ್‌ಗೆ 8,500 ರೂ.ಪರಿಹಾರ ಧನದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ರೂ.8,500 ಪರಿಹಾರ ಸೇರಿ ಒಟ್ಟು 17,000 ರೂ. ನೀಡಲಾಗುವುದು.

ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರ್‌ಗೆ ರೂ.17,000 ಪರಿಹಾರ ಧನದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 8,500 ರೂ. ಪರಿಹಾರ ಸೇರಿ ಒಟ್ಟು 25,500 ರೂ. ನೀಡಲಾಗುವುದು.

ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 22,500 ರೂ. ಪರಿಹಾರ ಧನದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ರೂ.8,500 ಪರಿಹಾರ ಸೇರಿ ಒಟ್ಟು ರೂ.31,000 ನಿಗದಿಗೊಳಿಸಿ ವಿತರಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read