HomeLatest Newsಬೆಂಗಳೂರಿನಲ್ಲಿ 2350 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಸಂಪುಟ...

ಬೆಂಗಳೂರಿನಲ್ಲಿ 2350 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಹಿಂಡ್ಲವಾಡಿ ಗ್ರಾಮದ 75 ಎಕರೆ ಪ್ರದೇಶದಲ್ಲಿ 2350 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮತ್ತು ಕ್ರೀಡಾಂಗಣ ಸಂಕೀರ್ಣ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ನೀಡಲಾಗಿದೆ.

ಕರ್ನಾಟಕ ಗೃಹ ಮಂಡಳಿ ಬೆಂಗಳೂರು ಸೂರ್ಯ ನಗರ ನಾಲ್ಕನೇ ಹಂತದ ಬಡಾವಣೆಯ ಸಮಗ್ರ ಅಭಿವೃದ್ಧಿ ಯೋಜನೆ ಅಡಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾಗಿದೆ. 80,000 ಆಸನ ವ್ಯವಸ್ಥೆಯ ಮೂಲಕ ದೇಶದ ಅತಿ ದೊಡ್ಡ ಸ್ಟೇಡಿಯಂಗಳಲ್ಲಿ ಇದು ಒಂದಾಗಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣ ಹಳೆಯದಾಗಿದ್ದು 38,000 ಆಸನ ವ್ಯವಸ್ಥೆ ಮಾತ್ರ ಹೊಂದಿದೆ. ಬೆಂಗಳೂರಿಗಿಂತ ಚಿಕ್ಕ ನಗರಗಳಲ್ಲಿ ದೊಡ್ಡ ಸ್ಟೇಡಿಯಂಗಳು ಇವೆ. ಆಧುನಿಕ ಸೌಲಭ್ಯಗಳು, ಇಂದಿನ ಕ್ರೀಡಾ ಅಗತ್ಯತೆಗೆ ಅನುಸಾರವಾಗಿ ಹೊಸ ಕ್ರೀಡಾಂಗಣ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular